Saturday, August 13, 2022

Latest Posts

ಸ್ಟಾರ್ ಹೋಟೆಲ್, ರೆಸ್ಟೊರೆಂಟ್‍ ರಾತ್ರಿ ಪಾರ್ಟಿಗಳಿಗೆ ನಿಷೇಧ ಹೇರಿದ ರಾಜ್ಯ ಸರ್ಕಾರ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ -19 ಸೋಂಕಿನ ಪ್ರಕರಣಗಳು ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯ್ಲಲ್ಲಿ ಎಲ್ಲಾ ರೀತಿಯ ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಇಂದಿನಿಂದ ರಾಜ್ಯಾದ್ಯಂತ, ಪ್ರಮುಖವಾಗಿ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ರಾತ್ರಿ ಹೊತ್ತು ಪಾರ್ಟಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಿದ್ದು, ಸ್ಟಾರ್ ಹೋಟೆಲ್, ರೆಸ್ಟೊರೆಂಟ್‍ಗಳಿಗೆ ಸೂಚಿಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಮುಂದಿನ ಆದೇಶದವರೆಗೂ ಈ ನಿಷೇಧ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ. ಮದುವೆ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನರು ಸೇರುವ ಎಲ್ಲಾ ಕಾರ್ಯಕ್ರಮಗಳ ಮೇಲೂ ನಿಗಾ ಇಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss