ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ ಅವರು ಈಗಾಗಲೇ ಬಹಳಷ್ಟು ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿದ್ದಾರೆ. ವಿಶೇಷವಾಗಿ ಗ್ರಾಮೀಣಾಭಿವೃದ್ಧಿ, ಕೃಷಿ, ಆಧುನಿಕತೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ.
ಆದರೆ ಇದೀಗ ಬಜೆಟ್ ನಲ್ಲಿ ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲಾಗುವುದು ಎಂದು ಹೇಳಲಾಗಿದೆ. 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.