ಹೊಸದಿಗಂತ ವರದಿ, ಮಂಡ್ಯ :
ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹನಕೆರೆ ಬಳಿ ನಡೆದಿದೆ.
ಮದ್ದೂರು ತಾಲೂಕು ದೇವರಹಳ್ಳಿ ಗ್ರಾಮದ ಪ್ರಕಾಶ್ (22)ಹಾಗೂ ಆಕಾಶ್ (23)ಎಂಬುವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಮೈಸೂರಿನಿಂದ ಜಾವಾ ಬೈಕ್ನಲ್ಲಿ ಮದ್ದೂರು ಕಡೆಗೆ ತೆರಳುತ್ತಿದ್ದ ಪ್ರಕಾಶ್ ಮತ್ತು ಆಕಾಶ್ ಅವರು ಹನಕೆರೆ ಬಳಿ ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಹಿರೋ ಹೋಂಡಾ ಫ್ಯಾಷನ್ ಪ್ಲೆಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡರು. ಈ ಪೈಕಿ ಪ್ರಕಾಶ್ನ ತಲೆಗೆ ತೀವ್ರವಾಗಿಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರಳೆದಿದ್ದಾನೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.