March 5, 2026
Thursday, March 5, 2026
spot_img

ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಹೆಜ್ಜೆ: ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಉಪೇಂದ್ರ ಕುಶ್ವಾಹ ಮತ್ತು ಶಿವೇಶ್ ಕುಮಾರ್ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ನಿತೀಶ್‌ ಕುಮಾರ್‌, ನನ್ನ ಸಂಸದೀಯ ಪ್ರಯಾಣದ ಆರಂಭದಲ್ಲೇ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯನಾಗುವ ಬಯಕೆಯನ್ನು ಹೊಂದಿದ್ದೆ. ಈ ಆಕಾಂಕ್ಷೆಯಂತೆ ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆಯ ಸದಸ್ಯನಾಗಲು ನಾನು ಬಯಸುತ್ತೇನೆ ಎಂದು ಬರೆದಿದ್ದಾರೆ.

ನಿಮ್ಮೊಂದಿಗಿನ ನನ್ನ ಈ ಸಂಬಂಧವು ಭವಿಷ್ಯದಲ್ಲಿಯೂ ಮುಂದುವರಿಯುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಬಿಹಾರವನ್ನು ನಿರ್ಮಿಸಲು ನಿಮ್ಮೊಂದಿಗೆ ಒಟ್ಟಾಗಿ ಕೆಲಸ ಮಾಡುವ ನನ್ನ ಸಂಕಲ್ಪವು ಮೊದಲಿನಂತೆಯೇ ಇರುತ್ತದೆ. ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ನಿತೀಶ್ ಕುಮಾರ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಎರಡು ದಶಕಗಳಿಗೂ ಹೆಚ್ಚು ಕಾಲ, ನೀವು ನಿರಂತರವಾಗಿ ನನ್ನ ಮೇಲೆ ನಿಮ್ಮ ನಂಬಿಕೆ ಮತ್ತು ಬೆಂಬಲವನ್ನು ಇರಿಸಿದ್ದೀರಿ. ನಿಮ್ಮ ನಂಬಿಕೆ ಮತ್ತು ಬೆಂಬಲದ ಶಕ್ತಿಯಿಂದ ಇಂದು ಬಿಹಾರವು ಅಭಿವೃದ್ಧಿಯಾಗುತ್ತಿದೆ. ಈ ಕಾರಣಕ್ಕೆ ಹಲವಾರು ಸಂದರ್ಭಗಳಲ್ಲಿ ನಾನು ನಿಮಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಬರೆದಿದ್ದಾರೆ.

ಇದೀಗ ತಮ್ಮ ಪುತ್ರ ನಿಶಾಂತ್‌ ಕುಮಾರ್‌ ರಾಜಕೀಯ ಪ್ರವೇಶಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !