ಸೋಲಿನತ್ತ ಹೆಜ್ಜೆ: ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲೋಪ ಎಂದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದಲ್ಲಿ ಬಿಜೆಪಿ 50 ಸ್ಥಾನಗಳ ಮುನ್ನಡೆಯಲ್ಲಿದ್ದು, ಕಾಂಗ್ರೆಸ್‌ 35 ಸ್ಥಾನಗಳ ಮುನ್ನಡೆಯಲ್ಲಿದೆ. ಈ ನಡುವೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್‌ ಫಲಿತಾಂಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿರುವ ಜೈರಾಮ್‌ ರಮೇಶ್‌, ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ (EC website) ಲೋಪವಾಗಿದೆ ಎಂದು ಆರೋಪಿಸಿದ್ದಾರೆ.

ಈಗಾಗಲೇ 10-11ನೇ ಸುತ್ತಿನ ಫಲಿತಾಂಶಗಳು ಹೊರಬಿದ್ದಿವೆ. ಆದ್ರೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಕೇವಲ 4-5 ಸುತ್ತುಗಳ ಫಲಿತಾಂಶ ಮಾತ್ರ ತೋರಿಸಲಾಗುತ್ತಿದೆ. ಲೋಕಸಭೆ ಮಾದರಿಯಲ್ಲಿ ಹಳೆಯ ಮತ್ತಯ ದಾರಿ ತಪ್ಪಿಸುವ ಫಲಿತಾಂಶ ತೋರಿಸಲಾಗುತ್ತಿದೆ. ಇದು ಆಡಳಿತದ ಮೇಲೆ ಒತ್ತಡ ಹೇರುವ ತಂತ್ರವಾಗಿದೆ. ಈ ಬಗ್ಗೆ ಜ್ಞಾಪಕ ಪತ್ರ ಸಲ್ಲಿಸುತ್ತಿದ್ದೇವೆ. ಆಯೋಗಕ್ಕೂ ದೂರು ಸಲ್ಲಿಸುತ್ತೇವೆ, ಚುನಾವಣಾ ಆಯೋಗ ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!