ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಋತ್ಯ ರೈಲ್ವೆ ವಲಯ ತಮಕೂರು ಜನರಿಗೆ ಸಿಹಿ ಸುದ್ದಿ ನೀಡಿದ್ದು, ಕೆಎಸ್ಆರ್ ಬೆಂಗಳೂರುನಿಂದ ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಇಂದಿನಿಂದ ತಮಕೂರು ನಿಲ್ದಾಣದಲ್ಲೂ ನಿಲುಗಡೆಯಾಗುತ್ತದೆ.
ಈ ಕುರಿತು ಟ್ವೀಟ್ ಮಾಡಿರುವ ನೈಋತ್ಯ ರೈಲ್ವೆ ವಲಯ, ವಂದೇ ಭಾರತ್ ತುಮಕೂರು ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ.
ಟೈಮಿಂಗ್ಸ್ ಹೀಗಿದೆ..
ರೈಲು ಸಂಖ್ಯೆ 20662 ಧಾರವಾಡ-ಕೆ.ಎಸ್.ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತುಮಕೂರು ನಿಲ್ದಾಣಕ್ಕೆ ಸಂಜೆ 6.18/6.20 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
ರೈಲು ಸಂಖ್ಯೆ 20661 ಕೆ.ಎಸ್.ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತುಮಕೂರು ನಿಲ್ದಾಣಕ್ಕೆ ಬೆಳಗ್ಗೆ 6:32/6:34 ಗಂಟೆಗೆ ಆಗಮಿಸಿ/ ನಿರ್ಗಮಿಸಲಿದೆ. ಉಳಿದಂತೆ ಎಲ್ಲಾ ನಿಲ್ದಾಣಗಳ ಸಮಯ ಈ ಹಿಂದಿನಂತೆ ಇರಲಿದೆ.