ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕರಸಾಲ ರಾಹುಲ್ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಈತ ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಸೋಮವಾರ ಕಾಲೇಜಿನಲ್ಲಿ ಪರೀಕ್ಷೆ ನಡೆದಿದ್ದು, ಈ ಸಮಯದಲ್ಲಿ ಕಾಲೇಜಿಗೆ ತಡವಾಗಿ ಬಂದಿದ್ದ. ಇದೇ ವಿಚಾರವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ನಿಂದಿಸಿರುವ ಶಂಕೆ ವ್ಯಕ್ತವಾಗಿದೆ. ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.