ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ವರದಿ, ಮಂಗಳೂರು:

ಮನೆಯಲ್ಲಿ ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಗ್ರಾಮದಲ್ಲಿ ನಡೆದಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್(16) ಆತ್ಮಹತ್ಯೆಗೆ ಶರಣಾದ ಯುವಕ.

ಸೋಮವಾರ (ಆ.19) ಮೃತ ವಿದ್ಯಾರ್ಥಿ ಪ್ರಥಮೇಶ್ ಮನೆಯಿಂದ ಕಾಣೆಯಾಗಿದ್ದನು. ಇಂದು ಬೆಳಿಗ್ಗೆ ಕಾಲೇಜು ಸಮೀಪದ ಮನೆಯ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!