ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಹೊಸದಿಗಂತ ವರದಿ, ಮೈಸೂರು
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟವಳು. ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ಈಕೆಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾಳೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸದ್ಯ ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿಯಲ್ಲಿರುವ ವಿದ್ಯಾರ್ಥಿನಿ ಶವ ಇಡಲಾಗಿದೆ, ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!