ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರಿನ ಅಂಬೇಡ್ಕರ್ ವೃತ್ತದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಜಾಗ್ವಾರ್ ಅಟ್ಟಹಾಸಕ್ಕೆ ವಿದ್ಯಾರ್ಥಿನಿ 15 ಅಡಿ ದೂರ ಹಾರಿ ಬಿದ್ದಿದ್ದಾಳೆ.
ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಜಾಗ್ವಾರ್ ಕಾರ್ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಅತಿಯಾದ ಸ್ಪೀಡ್‌ನಲ್ಲಿದ್ದ ಜಾಗ್ವಾರ್ ಕಾರ್ ಬೈಕ್‌ಗೆ ಗುದ್ದಿ ತದನಂತರ ರಸ್ತೆಯಲ್ಲಿ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಗುದ್ದಿದೆ. ವಿದ್ಯಾರ್ಥಿನಿಯೊಬ್ಬಳು ಕೆಳಗೆ ಬಿದ್ದಿದ್ದಾಳೆ. ಇನ್ನೊಬ್ಬಳು 15 ಅಡಿ ದೂರ ಹಾರಿ ಬಿದ್ದಿದ್ದಾಳೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
On Cam: Speeding Car Runs Over 3 As Biker Takes Sudden U-Turn In Karnataka's Raichur. pic.twitter.com/4lvE7hLKeN
— TIMES NOW (@TimesNow) July 26, 2023