VIDEO | ಲೈವ್ ಸ್ಟ್ರೀಮಿಂಗ್‌ನಲ್ಲೇ ಟೀಚರ್‌ಗೆ ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆನ್‌ಲೈನ್ ತರಗತಿ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ತನ್ನ ಪ್ರೊಫೆಸರ್‌ಗೆ ಚಪ್ಪಲಿಯಿಂದ ಹೊಡೆದಿದ್ದಾನೆ.

ದೆಹಲಿಯ ಆನ್‌ಲೈನ್ ಕಲಿಕೆ ವೇದಿಕೆ ಫಿಸಿಕ್ಸ್‌ವಾಲಾದಲ್ಲಿ ಲೈವ್ ಸ್ಟ್ರೀಮಿಂಗ್‌ನಲ್ಲೇ ವಿದ್ಯಾರ್ಥಿ ಬಾರಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಯ ವರ್ತನೆಗೆ ನೆಟ್ಟಿಗರು ಕೆಂಡಾಮಂಡಲವಾಗಿದ್ದಾರೆ.

ಕಪ್ಪು ಬೋರ್ಡ್ ಎದುರು ನಿಂತು ಟೀಚರ್ ಪಾಠಮಾಡುವ ವೇಳೆ ವಿದ್ಯಾರ್ಥಿ ಏಕಾಏಕಿ ದಾಳಿ ಮಾಡಿದ್ದಾನೆ, ಇದಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. ಏನೇ ಆಗಿರಲಿ ಶಿಕ್ಷಕರಿಗೆ ಈ ರೀತಿ ಮಾಡಿದ್ದು ತಪ್ಪು ಎಂದು ನೆಟ್ಟಿಗರು ಹೇಳ್ತಿದ್ದಾರೆ.

https://x.com/SweetLilQueen/status/1710179444785349007?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!