ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೆಳೆಯನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನೀಚ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕಾಂಚೀಪುರಂನಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ತನ್ನ ಬಾಯ್‌ಫ್ರೆಂಡ್ ಜತೆ ಹೊರಗೆ ಹೋಗಿದ್ದಳು. ಈ ವೇಳೆ ಇಬ್ಬರು ಕುಡುಕರು ಆಕೆಯ ಬಾಯ್‌ಫ್ರೆಂಡ್ ಮೇಲೆ ದಾಳಿ ನಡೆಸಿದ್ದಾರೆ. ನಂತರ ಇನ್ನು ನಾಲ್ವರು ಮುಸುಕುಧಾರಿಗಳು ಬಂದು ಚಾಕು ತೋರಿಸಿ ಯುವತಿಯನ್ನು ಬೆದರಿಸಿದ್ದಾರೆ.
ಕತ್ತಲೆ ಪ್ರದೇಶಕ್ಕೆ ಆಕೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಐವರನ್ನು ಬಂಧಿಸಲಾಗಿದೆ.