ಹೊಸದಿಗಂತ ವರದಿ ಮಡಿಕೇರಿ:
ಕಾವೇರಿ ನದಿಯಲ್ಲಿ ಸ್ನಾನಕ್ಕಿಳಿದ ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ಕೂಡಿಗೆ ಸಮೀಪದ ಕಣಿವೆಯಲ್ಲಿ ನಡೆದಿದೆ.
ಮೈಸೂರಿನ ಹೂಟಗಳ್ಳಿ ನಿವಾಸಿ ಹೃತ್ವಿಕ್ (16) ಮೃತ ವಿದ್ಯಾರ್ಥಿ. ತನ್ನ ಸ್ನೇಹಿತರೊಂದಿಗೆ ಬೆಟ್ಟದಪುರ ಗ್ರಾಮದ ಬೆಟ್ಟಕ್ಕೆ ಆಗಮಿಸಿದ್ದ ಆತ ಕೂಡಿಗೆ ಸಮೀಪದ ಕಣಿವೆಯಲ್ಲಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದು, ಈ ಸಂದರ್ಭ ನೀರು ಪಾಲಾಗಿರುವುದಾಗಿ ಹೇಳಲಾಗಿದೆ.
ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ.