ಕಾಲೇಜು ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ!

ಹೊಸ ದಿಗಂತ ವರದಿ, ಹಾಸನ:

ನಗರದ ಉದಯಗಿರಿಯಲ್ಲಿರುವ ಮಾಸ್ರ್ಸ್ ಕಾಲೇಜು ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದ್ವೀತಿಯ ಪಿಯುಸಿ ವಿದ್ಯಾರ್ಥಿಯ ಶವ ಗುರುವಾರ ಪತ್ತೆಯಾಗಿದ್ದು ಪೋಷಕರಿಂದ ಕೊಲೆ ಶಂಕೆ ವ್ಯಕ್ತವಾಗಿದೆ.

ವಿಕಾಸ್ (18) ಶವವಾಗಿ ಪತ್ತೆಯಾಗಿರುವ ವಿದ್ಯಾರ್ಥಿ. ಚನ್ನರಾಯಪಟ್ಟಣ ತಾಲ್ಲೂಕು, ಬೆಳಗುಲಿ ಗ್ರಾಮದ ಸುರೇಶ್, ಮಮತಾ ದಂಪತಿ ಒಬ್ಬನೇ ಮಗನಾದ ಆತ ಎರಡು ವರ್ಷಗಳಿಂದ ಹಾಸ್ಟೆಲ್‌ನಲ್ಲಿಯೇ ಉಳಿದುಕೊಂಡು ವಿದ್ಯಾಭ್ಯಾಸ ಮಾಡಿಕೊಂಡಿದ್ದ. ಓದಿನಲ್ಲಿ ಬಹಳ ಮುಂದಿದ್ದ ವಿಕಾಸ್, ಎಸ್‌ಎಸ್‌ಎಲ್‌ಸಿ, ಪ್ರಥಮ ಪಿಯುಸಿ ಹಾಗೂ ಈ ಬಾರಿ ನಡೆದ ಪೂರ್ವ ಸಿದ್ಧತಾ ಪರೀಕ್ಷೆಯಲ್ಲೂ ಉತ್ತಮ ಅಂಕಗಳನ್ನು ಗಳಿಸಿ ಆಡಳಿತ ಮಂಡಳಿಯ ಪ್ರಶಂಸೆಗೆ ಪಾತ್ರನಾಗಿದ್ದ ಎನ್ನಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!