ಏಕಾಏಕಿ ಸಿನಿಮಾ ಸೆಟ್‌ಗೆ ಬಿದ್ದ ಬೆಂಕಿ, ನಾಲ್ಕು ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜನಪ್ರಿಯ ನಟ ನಂದಮೂರಿ ಕಲ್ಯಾಣ್‌ ರಾಮ್‌ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ.

ಅವಘಡದಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ತಿಳಿಸಿದೆ. ಶಾರ್ಟ್ ಸರ್ಕ್ಯೂಟ್​ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು, ಸೆಟ್​ಗೆ ಬೆಂಕಿ ಬಿದ್ದಾಗ ಶೂಟಿಂಗ್ ನಡೆಯುತ್ತಿರಲಿಲ್ಲವಾದ್ದರಿಂದ ಯಾವುದೇ ಹಾನಿಯಾಗಿಲ್ಲ.

ನಂದಮೂರಿ ಕಲ್ಯಾಣ್ ರಾಮ್ ಅವರು ಕ್ರೈಂ ಥ್ರಿಲ್ಲರ್ ಕತೆಯುಳ್ಳ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಕಲ್ಯಾಣ್ ರಾಮ್ ಸಿಬಿಐ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣ ಹಾಗೂ ಕೆಲವು ಕಚೇರಿ ದೃಶ್ಯಗಳ ಚಿತ್ರೀಕರಣವನ್ನು ಚಿತ್ರತಂಡ ಸೆಟ್​ನಲ್ಲಿ ಮಾಡುತ್ತಿತ್ತು. ಇದಕ್ಕಾಗಿ ಹೈದರಾಬಾದ್ ಹೊರವಲಯದಲ್ಲಿ ಒಂದೇ ಜಾಗದಲ್ಲಿ ಬೇರೆ ಬೇರೆ ಸೆಟ್​ಗಳನ್ನು ನಿರ್ಮಾಣ ಮಾಡಲಾಗಿತ್ತು. ಸೆಟ್ ನಿರ್ಮಾಣಕ್ಕೆ ಸುಮಾರು 4 ಕೋಟಿ ಖರ್ಚು ಮಾಡಲಾಗಿತ್ತು ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!