ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಸತ್ತಿದೆ ಎಂದು ತಿಳಿದುಕೊಂಡಿದ್ದ ಕಂದಮ್ಮನೇ ಎದ್ದು ಕೂತಿದೆ…
ಇಳಕಲ್ ನಗರ ಅಚ್ಚರಿಗೆ ಸಾಕ್ಷಿಯಾಗಿದ್ದು, ಅಂತ್ಯಸಂಸ್ಕಾರಕ್ಕೆ ಬಂದ ನೆಂಟರ ಮುಖದ ಮೇಲೆ ನೆಮ್ಮದಿಯ ನಗು ಕಾಣಿಸಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಅಂತ್ಯಸಂಸ್ಕಾರದ ವೇಳೆ ಕೆಮ್ಮಿ ತಾನು ಬದುಕಿದ್ದೇನೆ ಎಂದು ಹೇಳಿದೆ.
ಉಸಿರಾಟ ತೊಂದರೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಗುವನ್ನು ಕಳೆದ ನಾಲ್ಕೈದು ದಿನಗಳ ಹಿಂದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕೋದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ವಾಪಸ್ ವಾಹನದಲ್ಲಿ ಬರುವಾಗ ಮಗುವಿಗೆ ಪ್ರಜ್ಞೆ ತಪ್ಪಿದೆ.
ಪ್ರಜ್ಞೆ ತಪ್ಪಿದ ಮಗು ಮೃತಪಟ್ಟಿದೆ ಎಂದು ಭಾವಿಸಿ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು. ಅದರಂತೆ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಅಂತ ಬಂದಿದ್ದು, ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗು ಕೆಮ್ಮಿದೆ. ಈ ವೇಳೆ ಮಗು ಬದುಕಿದೆ ಎಂದು ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.