ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಶಾಲೆಯೊಂದರಲ್ಲಿ ಹೋಮ್ ವರ್ಕ್ ಮಾಡಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕಿ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ.
ಖಾಸಗಿ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಹೋಮ್‌ವರ್ಕ್ ಮಾಡಿಲ್ಲ ಎಂದು ಶಿಕ್ಷಕಿ ವಿದ್ಯಾರ್ಥಿ ಕೈಗೆ ರಾಡ್‌ನಿಂದ ಹೊಡೆದಿದ್ದಾರೆ. ತಕ್ಷಣವೇ ವಿದ್ಯಾರ್ಥಿ ಕೈಯಿಂದ ರಕ್ತ ಸೋರಿದೆ.
ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೈಗೆ ಆರು ಹೊಲಿಗೆ ಹಾಕಲಾಗಿದೆ. ಈ ಘಟನೆ ನಡೆದು ಮೂರು ದಿನಗಳಾಗಿದ್ದು, ಘಟನೆಯನ್ನು ಮುಚ್ಚಿಹಾಕಲು ಆಡಳಿತ ಮಂಡಳಿ ಪ್ರಯತ್ನಿಸಿದ ಆರೋಪವೂ ಎದುರಾಗಿದೆ.