ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ತಿಂಗಳುಗಟ್ಟಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ.
ಶಿಕ್ಷಕನ ವರ್ತನೆಯ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಕಲ್ಯಾಣ ಕೇಂದ್ರದ ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಿ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಮಾಹಿತಿ ಆಧಾರದ ಮೇಲೆ ಶಿಕ್ಷಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಆತನ ವಿರುದ್ಧ ಪ್ರಥಮ ಎಫ್‌ಐಆರ್ ದಾಖಲಿಸಲಾಗಿದೆ