ಶಾಲೆಯಲ್ಲಿ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ: ನೊಂದು ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಲಕಿಯರ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಳೆ ಎಂದು ಶಂಕಿಸಿದ ಶಿಕ್ಷಕಿಯೊಬ್ಬರು ಬಲವಂತವಾಗಿ ಆಕೆಯ ಬಟ್ಟೆ ಬಿಚ್ಚಿಸಿದ ಘಟನೆ ಜಾರ್ಖಡ್‌ ನ ಜೆಮ್‌ಶೆಡ್‌ಪುರದಲ್ಲಿ ನಡೆದಿದ್ದು, ಘಟನೆಯಿಂದ ಮನನೊಂದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಆಕೆಯ ಕುಟುಂಬಸ್ಥರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಕೆ ತನ್ನ ಸಮವಸ್ತ್ರದಲ್ಲಿ ಕಾಗದದ ಚಿಟಿಯನ್ನು ಮರೆಮಾಡಿ ನಕಲು ಮಾಡುತ್ತಿದ್ದಳು ಎಂದು ಶಂಕಿಸಿದ ಶಿಕ್ಷಕಿ, ಆಕೆ ಸಮವಸ್ತ್ರದಲ್ಲಿ ಚಿಟಿಯನ್ನು ಬಚ್ಚಿಟ್ಟಿದ್ದಾಳೆಯೇ ಎಂದು ಕಂಡುಹಿಡಿಯಲು ತರಗತಿಯ ಪಕ್ಕದ ಕೋಣೆಯಲ್ಲಿ ಆಕೆಯ ಬಟ್ಟೆಗಳನ್ನು ತೆಗೆಯುವಂತೆ ಹೇಳಿದ್ದರು ಎನ್ನಲಾಗಿದೆ. ಶಿಕ್ಷಕಿಯ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹದಿಹರೆಯದ ಹುಡುಗಿ ಅವಮಾನವನ್ನು ಸಹಿಸಲಾರದೆ ಶಾಲೆಯಿಂದ ಹಿಂತಿರುಗಿದ ಬಳಿಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆಕೆಯ ತಾಯಿ ಹೇಳಿದ್ದಾರೆ. ಇಷ್ಟೆಲ್ಲಾ ಪ್ರಯತ್ನ ಮಾಡಿದರೂ ಶಾಲೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಏತನ್ಮಧ್ಯೆ, ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಅವರಲ್ಲಿ ಹಲವರು ಶಾಲೆಗೆ ಭೇಟಿ ನೀಡಿ ಶಿಕ್ಷಕಿಯ  ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!