ಇಬ್ಬರು ಪತ್ನಿಯರಿಗೆ ಸಮಯ ನೀಡಲು ಪ್ಲಾನ್ ಹುಡುಕಿದ ಟೆಕ್ಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಇಬ್ಬರನ್ನು ಮದುವೆಯಾದ ಸಾಫ್ಟ್‌ವೇರ್ ಇಂಜಿನಿಯರೊಬ್ಬ (Software Engineer)ಅವರಿಬ್ಬರೊಂದಿಗಿರಲು ಹೊಸ ಪ್ಲಾನ್ ಮಾಡಿದ್ದಾನೆ.

ಹೌದು, ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 28 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ 2 ಮದುವೆಯಾಗಿದ್ದನು. ಆದರೆ ಇನ್ನೊಂದು ಮದುವೆ ಆಗಿರುವುದು ಮೊದಲ ಪತ್ನಿಗೆ ತಿಳಿದಿರಲಿಲ್ಲ. ತಿಳಿದ ನಂತರ ಕೋರ್ಟ್‍ಗೆ ಹೋಗಿದ್ದಾಳೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್‍ವೊಂದನ್ನು ಹುಡುಕಿದ್ದಾನೆ.

ಅದೇನೆಂದರೆ ತನ್ನ ಇಬ್ಬರು ಪತ್ನಿಯರನ್ನು ಒಟ್ಟಿಗೆ ಕೂರಿಸಿ ನಿರ್ಧಾರಕ್ಕೆ ಬಂದಿದ್ದಾನೆ. ವಾರದಲ್ಲಿ 3 ದಿನ ಮೊದಲ ಪತ್ನಿಗಾದರೆ ಉಳಿದ ಮೂರು ದಿನ ಮತ್ತೋರ್ವ ಪತ್ನಿಯೊಂದಿಗೆ ಇರಲು ಸಮಯವನ್ನು ನಿಗದಿ ಮಾಡಿದ್ದಾನೆ. ಉಳಿದಂತೆ ಇನ್ನೊಂದು ದಿನ ಅಂದರೆ ಭಾನುವಾರ ತನ್ನಿಷ್ಟದಂತೆ ಸಮಯ ಕಳೆಯಲು ನಿರ್ಧರಿಸಿದ್ದು, ಇದಕ್ಕೆ ಆತನ ಪತ್ನಿಯರು ಒಪ್ಪಿಗೆ ಸೂಚಿಸಿದ್ದಾರೆ.

2008ರಲ್ಲಿ ವ್ಯಕ್ತಿಯು 26 ವರ್ಷದ ಮಹಿಳೆಯನ್ನು ವಿವಾಹವಾಗಿದ್ದ. ಆ ವೇಳೆ ಆತ ಗುರುಗ್ರಾಮನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. 2 ವರ್ಷಗಳ ಕಾಲ ದಂಪತಿ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು. ಅಷ್ಟೇ ಅಲ್ಲದೇ ಅವರಿಗೆ ಓರ್ವ ಮಗನು ಇದ್ದ. ಆದರೆ 2020ರಲ್ಲಿ ಕೊರೋನ ದಿಂದ ದಂಪತಿ ವರ್ಕ್ ಫ್ರಂ ಹೋಮ್‍ನಿಂದಾಗಿ ಗ್ವಾಲಿಯರ್‍ಗೆ ಬಂದರು. ಅದಾದ ಕೆಲ ತಿಂಗಳ ನಂತರ ವ್ಯಕ್ತಿಯೊಬ್ಬನೇ ಗುರುಗ್ರಾಮ್‍ಗೆ ಹಿಂದಿರುಗಿದನು. ಈ ವೇಳೆ ಅಲ್ಲಿ ಇನ್ನೊಂದು ಮದುವೆಯಾಗಿದ್ದಾನೆ.

ಗ್ವಾಲಿಯರ್‌ನಿಂದ ಗುರುಗ್ರಾಮಕ್ಕೆ ಪತ್ನಿಯು ಬರುತ್ತಿರುವುದಾಗಿ ಹೇಳಿದ್ದಾಳೆ. ಆ ವೇಳೆ 2021ರಲ್ಲೇ ಆ ಪತಿಗೆ ಅದೇ ಕಂಪನಿಯ ತನ್ನ ಸಹೋದ್ಯೋಗಿಯೊಂದಿಗೆ ಮದುವೆಯಾಗಿರುವುದು ಗೊತ್ತಾಗಿದೆ. ಅಷ್ಟೇ ಅಲ್ಲದೇ 2ನೇ ಪತ್ನಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಹಿನ್ನೆಲೆಯಲ್ಲಿ ಮೊದಲ ಪತ್ನಿ ಜೀವನಾಂಶ ಕೋರಿ ಗ್ವಾಲಿಯರ್‍ನ ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಈ ವೇಳೆ ವಕೀಲರೊಬ್ಬರು ಮೊದಲ ಪತ್ನಿ ವಿರೋಧಿಸಿದರೆ ಶಿಕ್ಷೆ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಇದರಿಂದಾಗಿ ಆತ ತನ್ನ ಇಬ್ಬರು ಪತ್ನಿಯರನ್ನು ಸೇರಿಸಿ ಮಾತುಕತೆ ನಡೆಸಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!