ಬೈಕ್‌ ಮೇಲೆ ಬಿತ್ತು ಹಾಲೋ ಬ್ಲಾಕ್ಸ್‌ ತುಂಬಿದ್ದ ಟೆಂಪೋ, ಮೂವರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾಲೋ ಬ್ಲಾಕ್​ ತುಂಬಿದ್ದ ಟೆಂಪೋ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಬಳಿಯ ಅಂಚೆಟ್ಟಿ ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಹಾಲೋ ಬ್ಲಾಕ್ ತುಂಬಿದ್ದ ಟೆಂಪೋ ಬೈಕ್ ಮೇಲೆ ಪಲ್ಟಿಯಾಗಿದೆ. ಈ ಪರಿಣಾಮ ಬೈಕ್​​ನಲ್ಲಿ ತೆರಳುತ್ತಿದ್ದ ಮಾದೇಶ್ ಹಾಗೂ ಜಯಲಕ್ಷ್ಮೀ ದಂಪತಿ ಮತ್ತು ಟೆಂಪೋದಲ್ಲಿದ್ದ ಕೂಲಿ ಕಾರ್ಮಿಕ ಗೋವಿಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆಯ ತಿರುವಿನಲ್ಲಿ ಹಾಲೋಬ್ಲಾಕ್ ತುಂಬಿದ್ದ ಟೆಂಪೋ ಪಲ್ಟಿಯಾಗಿದೆ. ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದ್ದು ಗಾಯಾಳುಗೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂಚೆಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!