ಬಸ್​ – ಬೈಕ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಸವಾರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಇದೇ ವೇಳೆ ಬೈಕ್​ನಲ್ಲಿ ಪೆಟ್ರೋಲ್​ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲೇ ಬಸ್​ಗೂ ವ್ಯಾಪಿಸಿದ್ದು, ಅದೃಷ್ಟವಶಾತ್​ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಿಕ್ಕಿರಿ ಮೇಡು ಬಳಿಯ ಹೊಸ ವೈದ್ಯಕೀಯ ಕಾಲೇಜು ಸಮೀಪ ಭಾನುವಾರ ಸಂಭವಿಸಿದೆ.
ಹೊಸೂರು ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್​ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಡಿಕ್ಕಿಯ ರಭಸಕ್ಕೆ ಪಲ್ಸರ್ ಬೈಕ್​ನ ಟ್ಯಾಂಕರ್​ನಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು, ಕುರುಬರಬಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!