ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು.
ಮೃತರ ಕುಟುಂಬಸ್ಥರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ್ದರು. ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಗೂ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.