ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಬಳಿಕ ಐವರು ಪೊಲೀಸರಿದ್ದ ಜೀಪ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ತಮಿಳುನಾಡಿನ ಕಿಲ್ಪೆನ್ನತುರ್ ಠಾಣಾ ವ್ಯಾಪ್ತಿಯ ತಿರುವಣ್ಣಾಮಲೈ- ದಿಂಡಿವನಂ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇದರ ಪರಿಣಾಮ ಕರ್ನಾಟಕ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ ಮೂವರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಕೆಎಸ್ಆರ್ಪಿ ಉಪ ಕಮಾಂಡರ್ ಪ್ರಭಾಕರ್ ಮತ್ತು ತಮಿಳುನಾಡು ಪೊಲೀಸ್ ಅಧಿಕಾರಿ ದಿನೇಶ್ ಮೃತಪಟ್ಟಿದ್ದಾರೆ.
ತಿರುವಣ್ಣಾಮಲೈ- ದಿಂಡಿವನಂ ಹೆದ್ದಾರಿಯಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದೀಗ ಇಬ್ಬರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನಿಸಲಾಗಿದ್ದು. ಮರಣೋತ್ತರ ಪರೀಕ್ಷೆಯ ನಂತರ ದೇಹವನ್ನು ಕರ್ನಾಟಕ ಪೊಲೀಸರಿಗೆ ಹಸ್ತಾಂತರಿಸಲಾಗುವುದು. ಮೃತಪಟ್ಟಿರುವ ಬಗ್ಗೆ ಪ್ರಭಾಕರ್ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.