ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ 50 ಪ್ರಯಾಣಿಕರನ್ನು ಸಾಗಿಸುತ್ತಿದ್ದ ಖಾಸಗಿ ಬಸ್ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಾರದಾ ನದಿಯ ಸೇತುವೆಯ ಮೇಲೆ ಬುಧವಾರ ಅಪಘಾತ ಸಂಭವಿಸಿದೆ ಎಂದು ಮೂಲಗಳು ವರದಿ ಮಾಡಿವೆ.
ಧೌರ್ಹರಾದಿಂದ ಬಸ್ ಲಖಿಂಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬೆಳಿಗ್ಗೆ 7:30 ರ ಸುಮಾರಿಗೆ ಬಸ್ ಮತ್ತು ಟ್ರಕ್ ಇಸಾನಗರ ಪೊಲೀಸ್ ಠಾಣೆ ಬಳಿಯ ಸೇತುವೆಯ ಮೇಲೆ ಮುಖಾಮುಖಿ ಡಿಕ್ಕಿ ಹೊಡೆದಿವೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, 12 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಪೋಲೀಸರು ಈ ಕುರಿತು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.