ACCIDENT | ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ – ಲಾರಿ ನಡುವೆ ಭೀಕರ ಅಪಘಾತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜಿಲ್ಲೆಯ ಕವಲಗಿ ಗ್ರಾಮದ ಬಳಿ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ವಿಜಯಪುರದಿಂದ ಹೊರಟಿದ್ದ ಬಸ್‌ಗೆ ಕಲಬುರಗಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕವಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!