February 2, 2026
Monday, February 2, 2026
spot_img

ಪಿಕಪ್​ ವಾಹನ -ಸ್ಕೂಟಿ ಮಧ್ಯೆ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಿಕಪ್​ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅರಿಶಿನಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಅರಿಶಿನಗುಪ್ಪೆ ಗ್ರಾಮದ ಚಂದಿಕ್ರಾ (40) ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆಯಲ್ಲಿ ಏಕಾಏಕಿ ಪಿಕಪ್ ವಾಹನ ಮಹಿಳೆಯ ಮೇಲೆ ಹರಿದು ಹೋಗಿದೆ. ಈ ಘಟನೆಯಿಂದ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿದ್ದು, ಈ ವೇಳೆ ಸಿ.ಟಿ. ರವಿ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳಕ್ಕೆ ಬಂದ ಎಂಎಲ್ಸಿ ಸಿ.ಟಿ ರವಿ ಮುಂದೆ ಗ್ರಾಮಸ್ಥರು ಅಪಘಾತ ಸಂಭವಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳಿಲ್ಲ‌, ಘಟನೆ ನಡೆದ ತಕ್ಷಣ ಸರ್ಕಾರಿ ಆಂಬ್ಯುಲೆನ್ಸ್​ ಬಂದಿಲ್ಲ‌. ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ನೀವು ಇಲ್ಲಿಂದ ಹೋಗಿ, ನಾವು ಮೃತದೇಹ ತೆಗೆಯಲು ಬಿಡುವುದಿಲ್ಲ ‌ಎಂದು ಗ್ರಾಮಸ್ಥರು ಪಟ್ಟುಹಿಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !