ಟ್ರಕ್, ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಪ್ರಯಾಣಿಕರ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಸಫಿಪುರ್ ಠಾಣಾ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಹರ್ದೋಯ್-ಉನ್ನಾವೋ ರಸ್ತೆಯ ಜಮಾಲ್ದಿಪುರ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಫಿಪುರ್ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಗಾಯಾಳುಗಳನ್ನು ಉನ್ನಾವೋ ಮತ್ತು ಕಾನ್ಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಫಿಪುರ್ ಜಿಲ್ಲಾ ಅಧಿಕಾರಿ ರಿಷಿಕಾಂತ್ ಶುಕ್ಲಾ ತಿಳಿಸಿದ್ದಾರೆ. ಬಸ್ ನಲ್ಲಿ ಒಟ್ಟು 35 ಪ್ರಯಾಣಿಕರಿದ್ದರು ಎಂದು ಶುಕ್ಲಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!