ರಾಷ್ಟ್ರೀಯ ಹೆದ್ದಾರಿಯಲ್ಲಿ ಐದು ಖಾಸಗಿ ಬಸ್‌ಗಳ ನಡುವೆ ಭೀಕರ ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲಮಂಗಲದ ತೊಣಚಿನಗುಪ್ಪೆ ಬಳಿ ಐದು ಖಾಸಗಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಸರಣಿ ಅಪಘಾತದಿಂದಾಗಿ 25 ಮಂದಿ ಗಾಯಗೊಂಡಿದ್ದು, ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಬಸ್‌ನಿಂದ ಜನರನ್ನು ಹೊರಕರೆತರಲು ಸ್ಥಳೀಯರು ಸಹಾಯ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!