ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಎರಡು ಬಸ್‌ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಮುಂಜಾನೆ ಮೂರು ಗಂಟೆಗೆ ಅಪಘಾತ ಸಂಭವಿಸಿದ್ದು, ಒಟ್ಟಾರೆ 25 ಮಂದಿ ಗಾಯಗೊಂಡಿದ್ದಾರೆ. ಮುಂಬೈ ನಾಗ್ಪುರ ಹೆದ್ದಾರಿಯ ಲಕ್ಷ್ಮಿ ನಗರ ಮಲ್ಕಾಪುರ ಬಳಿಯ ಫ್ಲೈ ಓವರ್‌ನಲ್ಲಿ ಅಪಘಾತ ಸಂಭವಿಸಿದೆ.
ಅಮರನಾಥ ತೀರ್ಥಯಾತ್ರೆಯಿಂದ ಬಸ್ ವಾಪಾಸಾಗುವಾಗ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡು ಬಸ್‌ಗಳು ನಜ್ಜುಗುಜ್ಜಾಗಿವೆ.