ಬೆಂಗಳೂರಿನ ನೈಸ್‌ರೋಡ್‌ನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 2 ವರ್ಷದ ಕಂದಮ್ಮ ಸೇರಿ ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಬೆಳಗಿನ ಜಾವ ಮೈಸೂರಿನಿಂದ ಕನಕಪುರ ರಸ್ತೆ ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿದೆ, ನಂತರ ಮೋರೆಯ ಗೋಡೆಗೆ ಗುದ್ದಿ ಬೆಂಕಿ ಹೊತ್ತಿದೆ.

ಕಾರ್‌ನಲ್ಲಿದ್ದ ಸಿಂಧು ಹಾಗೂ ಅವರ ಎರಡು ವರ್ಷದ ಕಂದಮ್ಮ ಮೃತಪಟ್ಟಿದೆ, ಪತಿ ಮಹೇಂದ್ರ ಹಾಗೂ ಇನ್ನೊಂದು ಮಗು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಗುದ್ದಿದ ರಭಸಕ್ಕೆ ಲಾರಿಯೂ ರಸ್ತೆ ಬದಿಗೆ ಬಿದ್ದಿದೆ. ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!