ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ: ಸ್ಕೈ ವಾಕರ್ ಪಿಲ್ಲರ್ ಗೆ KSRTC ಬಸ್ ಡಿಕ್ಕಿ, ಪ್ರಯಾಣಿಕರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಅಪಘಾತ ಸಂಭವಿಸಿದ ಘಟನೆ ಕಡೂರು ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಅಂಚೆ ಚೋಮನಹಳ್ಳಿ ಕಚೇರಿ ಬಳಿ ಸ್ಕೈ ವಾಕರ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಕಡೂರಿನಿಂದ ಅರಸೀಕೆರೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಕಡೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತ ಸ್ಕೈವಾಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!