ದಕ್ಷಿಣ ಆಫ್ರಿಕಾದಲ್ಲಿ ಭೀಕರ ಅಪಘಾತ: 45 ಜನ ಪ್ರಯಾಣಿಕರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದಲ್ಲಿ ಈಸ್ಟರ್ ಸಮ್ಮೇಳನಕ್ಕೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದು 45 ಜನರು ಸಾವನ್ನಪ್ಪಿ, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ದಕ್ಷಿಣ ಆಫ್ರಿಕಾ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ಪ್ರಕಾರ, ಮೂರ್ತಪಟ್ಟವರೆಲ್ಲರೂ ನೆರೆಯ ರಾಷ್ಟ್ರವಾದ ಬೋಟ್ಸ್ವಾನಾದ ರಾಜಧಾನಿ ಗ್ಯಾಬೊರೊನ್‌ನಿಂದ ಈಸ್ಟರ್ ಸಮ್ಮೇಳನಕ್ಕಾಗಿ ಚರ್ಚ್‌ಗೆ ಪ್ರಯಾಣಿಸಿದ ಯಾತ್ರಿಕರು ಎಂದು ತಿಳಿದು ಬಂದಿದೆ.

ಎಂಟು ವರ್ಷದ ಬಾಲಕಿ ಮಾತ್ರ ಬದುಕುಳಿದಿದ್ದಾಳೆ ಎಂದು SABC ಹೇಳಿದೆ. ಬಾಲಕಿಯನ್ನು ವಿಮಾನದ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಮೊಕೊಪಾನೆ ಮತ್ತು ಮಾರ್ಕೆನ್ ನಡುವಿನ ಮಮತ್ಲಕಲಾ ಹಾದಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಅಪಘಾತಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಸೇತುವೆಯಿಂದ 50 ಮೀಟರ್ ಕೆಳಗಿರುವ ಹೊಂಡಕ್ಕೆ ಬಸ್ ಬಿದ್ದ ಸ್ವಲ್ಪ ಸಮಯದಲ್ಲೇ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್ಯ ಸಾರಿಗೆ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!