ಥಾಯ್ಲೆಂಡ್‌ನಲ್ಲಿ ಭೀಕರ ಅಪಘಾತ: ಮರಕ್ಕೆ ಬಸ್ ಡಿಕ್ಕಿಯಾಗಿ 14 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಥಾಯ್ಲೆಂಡ್‌ನಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 14 ಮಂದಿ ಮೃತಪಟ್ಟಿದ್ದಾರೆ.

ಪಶ್ಚಿಮ ಪ್ರಾಂತ್ಯದ ಪ್ರಚುವಾಪ್ ಖಿರಿ ಖಾನ್‌ನಲ್ಲಿ ಮಧ್ಯರಾತ್ರಿ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಅರ್ಧಭಾಗ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ 14 ಮಂದಿ ಮೃತಪಟ್ಟಿದ್ದಾರೆ. 20 ಜನರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹಗಳನ್ನು ಬಸ್‌ನಿಂದ ಹೊರತೆಗೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!