ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರ ಸ್ಥಿತಿ ಗಂಭೀರವಾಗಿದೆ.
ಹಾಲಿನ ಲಾರಿ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಸ್ಥಲೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿಟ್ಟಮಾರನಹಳ್ಳಿ ಬಳಿ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ತೆರಳುತ್ತಿದ್ದ ಕಾರ್ ನಿಯಂತ್ರಣ ತಪ್ಪಿ ಹಾಲಿನ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ಪಕ್ಕದ ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ. ಕಾರ್‌ನಲ್ಲಿ ಇದ್ದವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಕ್ಸ್‌ಪ್ರೆಸ್‌ವೇಗಳಲ್ಲಿ ಅಪಘಾತ ಸಾಮಾನ್ಯ ಎನ್ನುವಷ್ಟು ಸಾಮಾನ್ಯವಾಗಿದ್ದು, ಇನ್ನಾದರೂ ಚಾಲಕರು ಗಮನವಹಿಸಬೇಕಾಗಿದೆ.