ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು-ಬೆಂಗಳೂರು (Bengaluru-Mysuru) ಎಕ್ಸ್ ಪ್ರೆಸ್ ವೇ ಯಲ್ಲಿ ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲೇ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ (ShriRangapatna) ತಾಲೂಕಿನ ಟಿ.ಎಂ.ಹೊಸೂರು ಗ್ರಾಮದ ಬಳಿ ನಡೆದಿದೆ.
ಮೈಸೂರು ಕಡೆಗೆ ಸ್ವಿಫ್ಟ್ ಕಾರು, ಬೆಂಗಳೂರಿನತ್ತ ವರ್ನಾ ಕಾರು ಹೋಗುತ್ತಿದ್ಧ ವೇಳೆ ವರ್ನಾ ಕಾರು ಡಿವೈಡರ್ ಹಾರಿ ಬಂದು ಮೈಸೂರಿನ ಕಡೆ ಹೋಗುತ್ತಿದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ
ಕಾರು ಡಿಕ್ಕಿಯಾದ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಯಾಳುಗಳನ್ನು ಮೈಸೂರು ಖಾಸಗಿ ಆಸ್ವತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.