ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋನೇಷ್ಯಾದಲ್ಲಿ ಮತ್ತೊಂದು ಭೀಕರ ರಸ್ತೆ ದುರಂತ ಸಂಭವಿಸಿದ್ದು, ಜಾವಾ ದ್ವೀಪದ ಸಮೀಪ ಟೋಲ್ ರಸ್ತೆಯಲ್ಲಿ ಬಸ್ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ತಡರಾತ್ರಿ ನಡೆದ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಷ್ಟ್ರ ರಾಜಧಾನಿ ಜಕಾರ್ತಾದಿಂದ ಐತಿಹಾಸಿಕ ನಗರ ಯೋಗ್ಯಕರ್ತಾಕ್ಕೆ ತೆರಳುತ್ತಿದ್ದ ಅಂತರ-ಪ್ರಾಂತೀಯ ಬಸ್‌ನಲ್ಲಿ ಒಟ್ಟು 34 ಪ್ರಯಾಣಿಕರು ಇದ್ದರು. ಟೋಲ್ ರಸ್ತೆಯಲ್ಲಿ ವೇಗವಾಗಿ ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಬಸ್ ಪಲ್ಟಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

