Thursday, January 8, 2026

ಅಡಿಕೆ ಕೆಲಸ ಮಾಡಿ ಮನೆಗೆ ಬರುತ್ತಿದ್ದವರ ಭೀಕರ ಅಂತ್ಯ! ಕಾರ್‌ ಮರಕ್ಕೆ ಡಿಕ್ಕಿಯಾಗಿ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಕಿರಣ್(25), ಅರುಣ್(32), ಗಿರಿರಾಜ್(46) ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಹನುಮಂತಪ್ಪ (32) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮಾಯಕೊಂಡದಲ್ಲಿ ಅಡಿಕೆ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕಲ್ಲವ್ವ ನಾಗತಿಹಳ್ಳಿಯವರಾಗಿದ್ದಾರೆ. ಒಂದೇ ಗ್ರಾಮದ ನಾಲ್ವರು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!