ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದ ಪ್ರಿಯಾ ಎಕ್ಸ್ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಒಬ್ಬರು ಮಹಿಳೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮಹಿಳೆ ಶೋಭಾ ತೇಲಿ ಎನ್ನುವ ಮಹಿಳೆ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಿಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಪ್ರಿಯಾ ಎಕ್ಸ್ಪೋರ್ಟ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್ಪೋರ್ಟ್ ಮಾಡುವ ಕಾರ್ಖಾನೆಯಾಗಿದ್ದು, ಹೈ ಪ್ರೆಶರ್ನಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಲಾಸ್ಟ್ ಆದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗುಜ್ಜಾಗಿದೆ.