ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿಯ ಬ್ಯಾಡಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂಟೆಬೆನ್ನೂರ ಗ್ರಾಮದ ಬಳಿ ಮುಂಜಾನೆ ಬಸ್ ಪಲ್ಟಿಯಾಗಿದ್ದು, ಚಾಲಕ ಹಾಗೂ ಪ್ರಯಾಣಿಕ ಮೃತಪಟ್ಟಿದ್ದಾರೆ. ಬಸ್ ನಿಯಂತ್ರಣ ತಪ್ಪಿದ್ದು, ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಸ್ ಚಾಲಕ ಸದಾನಂದ ಮೃತಪಟ್ಟಿದ್ದು, ಪ್ರಯಾಣಿಕನ ಗುರುತು ಇನ್ನೂ ಪತ್ತೆಯಾಗಿಲ್ಲ.
ಈ ಬಸ್ ಬೆಂಗಳೂರಿನಿಂದ ಮೀರಜ್‌ಗೆ ತೆರಳುತ್ತಿತ್ತು. ಸಾಕಷ್ಟು ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.