ಕುಂಭಮೇಳದ ಕಾಲ್ತುಳಿತದಲ್ಲಿ ಸಾವಿರ ಜನರು ಸಾವು: ಸಂಸತ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ವಾದ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ 1,000 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾನು ಹೇಳಿದ್ದೇನೆ. ಒಂದು ವೇಳೆ ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ಸಾವಿನ ಸಂಖ್ಯೆಯ ನಿಖರವಾದ ವರದಿಯನ್ನು ಬಿಡುಗಡೆ ಮಾಡಲಿ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಜನವರಿ 29ರಂದು ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಮಡಿದ ʻಸಾವಿರಾರುʼ ಜನರಿಗೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದರು. ಈ ವೇಳೆ ಸಭಾಪತಿ ಜಗದೀಪ್ ಧನಕರ್ಅವರು, ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಹೇಳಿದರು.

ಮಾತು ಮುಂದುವರಿಸಿದ ಖರ್ಗೆ, ಮಹಾಕುಂಭದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ನಾನು ಮಾತನಾಡಲು ಬಯಸುತ್ತೇನೆ. ತುಂಬಾ ಜನರು ಅಲ್ಲಿ ಪ್ರಾಣ ಕಳೆದುಕೊಂಡರು. ನಾನು ಅಲ್ಲಿ 1 ಸಾವಿರ ಜನರು ಸಾವನ್ನಪ್ಪಿದ್ದಾರೆ ಎಂದು ನಾನು ಹೇಳಿದ್ದೇನೆ. ನಾನು ಹೇಳಿದ್ದು ತಪ್ಪು ಎನ್ನುವುದಾದರೆ ಕನಿಷ್ಠ ಅಲ್ಲಿ ಆಗಿರುವ ಸಾವುಗಳ ಸಂಖ್ಯೆಯ ನಿಖರವಾದ ವರದಿ ಕೊಡಿ ಎಂದು ಆಗ್ರಹಿಸಿದರು.

ಖರ್ಗೆ ಹೇಳಿಕೆಗೆ‌ ಆಡಳಿತ ಪಕ್ಷ ನಾಯಕರಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು. ಈ ವೇಳೆ ಗದ್ದಲ ಏರ್ಪಟ್ಟಿತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!