Tuesday, August 16, 2022

Latest Posts

ಕೋವಿಡ್ ಸಂಬಂಧ ಕೊಡಗಿನಲ್ಲಿ ಉಸ್ತುವಾರಿ ಸಚಿವರಿಂದ ಮೂರು ದಿನ ಪರಿಶೀಲನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಶುಕ್ರವಾರದಿಂದ ಭಾನುವಾರದವರೆಗೆ ಕೊಡಗು ಜಿಲ್ಲೆಯಲ್ಲಿ ಕೋವಿಡ್ ತಡೆ ಸಂಬಂಧ ಪರಿಶೀಲನೆ ನಡೆಸಲಿದ್ದಾರೆ.
ಮೇ 14ರಂದು 3 ಗಂಟೆಗೆ ಮಡಿಕೇರಿಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಸಭೆ ನಡೆಲಿರುವ ಸಚಿವರು ಸಂಜೆ 4.30 ಗಂಟೆಗೆ ಕೊಡಗು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಸಂಜೆ 5.30 ಗಂಟೆಗೆ ಗಾಳಿಬೀಡು ನವೋದಯ ಶಾಲೆಯಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ.
ಶನಿವಾರ ಬೆಳಗ್ಗೆ 10 ಗಂಟೆಗೆ ವೀರಾಜಪೇಟೆ ತಾಲೂಕು ಆಸ್ಪತ್ರೆ ಹಾಗೂ ಆತ್ರೇಯ ಆಸ್ಪತ್ರೆಗೆ ಭೇಟಿ ನೀಡಲಿರುವ ಸಚಿವ ಸೋಮಣ್ಣ,ಮಧ್ಯಾಹ್ನ 12:00 ಗಂಟೆಗೆ ಕುಟ್ಟ ಗ್ರಾಮದಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್ ಮತ್ತು ಚೆಕ್ ಪೋಸ್ಟ್ ಪರಿಶೀಲನೆ ನಡೆಲಿದ್ದಾರೆ. ಅಪರಾಹ್ನ 3.30 ಗಂಟೆಗೆ ಗೋಣಿಕೊಪ್ಪ ಲೋಪಮುದ್ರ ಆಸ್ಪತ್ರೆಗೆ,ಸಂಜೆ 4.15 ಗಂಟೆಗೆ ಪಾಲಿಬೆಟ್ಟ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ಪರಿಶೀಲಿಸಲಿದ್ದಾರೆ.
ಭಾನುವಾರ ಬೆಳಗ್ಗೆ 9.45 ಗಂಟೆ – ಕೂಡಿಗೆ ಗ್ರಾಮದಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಲಿರುವ ಅವರು, ಪೂರ್ವಾಹ್ನ 11 ಗಂಟೆಗೆ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ಪರಿಶೀಲನೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss