Tuesday, February 27, 2024

ಮೈಸೂರಿನಲ್ಲಿ ಕಾರು ಡಿಕ್ಕಿ ಹೊಡೆಡು ಹುಲಿ ಸಾವು

ಹೊಸದಿಗಂತ ವರದಿ,ಮೈಸೂರು:

ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರಿ ಗಾತ್ರದ ಹುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ.

ಸುಮಾರು ಒಂದುವರೆ ವರ್ಷದ ಈ ಹುಲಿ ಭಾನುವಾರ ಮಧ್ಯರಾತ್ರಿ 12 ರ ವೇಳೆಯಲ್ಲಿ ರಸ್ತೆಯನ್ನು ದಾಟುತ್ತಿದ್ದಾಗ, ವೇಗವಾಗಿ ಬಂದ ಇಟಿಯೋಸ್ ಕಾರ್ ಹುಲಿಗೆ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಹುಲಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ
ಅರಣ್ಯಾಧಿಕಾರಿಗಳಾದ ಮಾಲತಿ ಪ್ರಿಯ,ಲಕ್ಷ್ಮಿ ನಾರಾಯಣ್,ಸುರೇಂದ್ರ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿ, ಹುಲಿಯ ಮೃತದೇಹವನ್ನ ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಂಜನಗೂಡು ಹಾಗೂ ಸುತ್ತ ಮುತ್ತ ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿತ್ತು.ಇದೇ ಹುಲಿ ಅಪಘಾತದಲ್ಲಿ ಸಿಲುಕಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಹುಲಿ ಸಾವಿಗೆ ಕಾರಣವಾದ ಕಾರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು, ಕಾರಿನ ಪ್ರಯಾಣಿಕರನ್ನ ವಿಚಾರಣೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!