ಹೊಸದಿಗಂತ ವರದಿ,ಹಾಸನ:
ಪಾರ್ಕಿಂಗ್ ವಿಚಾರಕ್ಕೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿರುವ ಘಟನೆ ಬೇಲೂರಿನ ಚೆನ್ನಕೇಶವ ದೇವಾಲಯದ ಆವರಣದಲ್ಲಿ ನಡೆದಿದೆ.
ದಾವಣಗೆರೆ ಮೂಲದ ವೀಣಾ ಬಸವರಾಜು ಹಲ್ಲೆಗೊಳಗಾದ ಮಹಿಳೆ ಪಾರ್ಕಿಂಗ್ ಶುಲ್ಕ ವಸೂಲಿಗಾರ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಮಹಿಳೆ ಗಾಯಗೊಂದಿದ್ದಾರೆ. ಅಲ್ಲದೇ ಈ ವೇಳೆ ಮಧ್ಯ ಪ್ರವೇಶಿಸಿದ ಆಕೆಯ ಮಗನ ಮೇಲೂ ಹಲ್ಲೆ ಮಾಡಲಾಗಿದೆ. ವೀಣಾ ಕುಟುಂಬದ ಸದಸ್ಯರೊಂದಿಗೆ ಪ್ರವಾಸಕ್ಕೆ
ಬಂದಿದ್ದರು. ಈ ವೇಳೆ ಅವರ ಪುತ್ರ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಶುಲ್ಕ ವಸೂಲಿ ಮಾಡುವ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ವೀಣಾ ಹಾಗೂ ಅವರ ಮಗನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ನೆಲಕ್ಕೆ ಬಿದ್ದ ಮಹಿಳೆಗೆ ಮುಖಕ್ಕೆ ಗಾಯವಾಗಿದೆ.
ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹೊಲಿಗೆ ಹಾಕಿಸಿಕೊಂಡಿದ್ದಾರೆ. ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲಿ ಹಾಕಿಕೊಂಡು, ದೇವಾಲಯದ ಬಳಿ ಪ್ರವಾಸಿಗರಿಗೆ ರಕ್ಷಣೆ ಇಲ್ಲ. ಪ್ರವಾಸಿಗರಿಗೆ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆ ಖಾಸಗಿ ವ್ಯಕ್ತಿಗೆ ಪಾರ್ಕಿಂಗ್ ವ್ಯಸ್ಥೆಗೆ ಜಾಗವನ್ನು ಗುತ್ತಿಗೆ ನೀಡಿದೆ. ಪ್ರವಾಸಿಗರ ಮೇಲೆ ಹಲ್ಲೆಯಾದರೂ ಇಲಾಖೆ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ವಿಚಾರವಾಗಿ ದೂರು ನೀಡಿದರೆ ಬೇರೆ ಜಿಲ್ಲೆಯ ಪ್ರವಾಸಿಗರು ಇಲ್ಲಿಗೆ ಪುನಃ ಓಡಾಡಬೇಕು ಇದು ಕಷ್ಟವಾಗಿದೆ. ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮಗೊಳ್ಳಬೇಕು ಎಂದು ಮಹಿಳೆ ಆಗ್ರಹಿಸಿದ್ದಾರೆ.