ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಸೇನಾನಿಗಳ ಸ್ಮರಣಾರ್ಥ ಪಂಜಿನ‌ ಮೆರವಣಿಗೆ

ಹೊಸದಿಗಂತ ವರದಿ, ಮಡಿಕೇರಿ
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಭಗತ್ ಸಿಂಗ್, ಸುಖದೇವ್, ರಾಜಗುರು ಅವರ ಸ್ಮರಣಾರ್ಥ ಬಿಜೆಪಿ ಕಾರ್ಯಕರ್ತರು ಬುಧವಾರ ಸಂಜೆ ಜಿಲ್ಲೆಯ ವಿವಿಧೆಡೆ ಪಂಜಿನ ಮೆರವಣಿಗೆ ನಡೆಸುವ ಮೂಲಕ ‘ಬಲಿದಾನ್ ದಿವಸ್’ನ್ನು ಆಚರಿಸಿದರು.
ಜಿಲ್ಲಾ ಕೇಂದ್ರ ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣದಿಂದ ಕೋಟೆ ಸಮೀಪದ ಯುದ್ಧ ಸ್ಮಾರಕದವರೆಗೆ ಪಂಜಿನ‌ ಮೆರವಣಿಗೆ ನಡೆಯಿತು.
ಬಿಜೆಪಿ ಯುವ ಮೋರ್ಚಾದ ಮಡಿಕೇರಿ ನಗರ ಹಾಗೂ ಮಡಿಕೇರಿ ಗ್ರಾಮಾಂತರ ಮಂಡಲದ ವತಿಯಿಂದ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಗೆ ಬಿಜೆಪಿ ಅಧ್ಯಕ್ಷ ಕಾಂಗಿರ ಅಶ್ವಿನ್ (ಸತೀಶ್) ಅವರು ಚಾಲನೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ತಾಲೂಕು ಪ್ರಧಾನ ಕಾರ್ಯದರ್ಶಿ ಡೀನ್ ಬೋಪಣ್ಣ, ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್, ನಗರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ನವೀನ್ ಪೂಜಾರಿ, ಮಡಿಕೇರಿ ಗ್ರಾಮಾಂತರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೋರೆರ ಹೇಮಂತ್,ಪ್ರಧಾನ ಕಾರ್ಯದರ್ಶಿ ಚೇತನ್ ಬಂಗೇರ, ಜಿಲ್ಲಾ ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ಯಶ್ವಿನ್ ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮತ್ತು ನೂರಾರು ಮಂದಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಸೋಮವಾರಪೇಟೆ: ಸೋಮವಾರಪೇಟೆಯಲ್ಲಿ ಆಂಜನೇಯ ದೇವಾಲಯದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ನಡೆದ ಪಂಜಿನ ಮೆರವಣಿಗೆ ನಡೆಯಿತು.
ಕಾರ್ಯಕ್ರಮದ ಬಗ್ಗೆ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿದರು.
ಯುವ ಮೋರ್ಚಾದ ಬಿಜೆಪಿ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ಸೋಮವಾರಪೇಟೆ ಮಂಡಲ ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೇರೂರು, ಮಂಡಲ ಬಿಜೆಪಿ ಅಧ್ಯಕ್ಷ ಮನು ರೈ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಮಾದಪ್ಪ ಸೇರಿದಂತೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಗೋಣಿಕೊಪ್ಪ: ಬಿ. ಜೆ. ಪಿ ಯುವ ಮೋರ್ಚಾ ವತಿಯಿಂದ ಗೋಣಿಕೊಪ್ಪಲು ಆರ್. ಎಂ.ಸಿ ಯಿಂದ ಬಸ್ ನಿಲ್ದಾಣನದವರಗೆ ನೂರಾರು ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆ ನಂತರ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸೇವಾ ಭಾರತಿ ಜಿಲ್ಲಾಧ್ಯಕ್ಷ ಟಿ.ಸಿ ಚಂದ್ರನ್ ಅವರು ದಿನದ ಮಹತ್ವದ ಕುರಿತು ಮಾತನಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!