ಹೊಸದಿಗಂತದ ಹಿರಿಯ ಪತ್ರಕರ್ತ ಬಾಳೆಪುಣಿ ಸಹಿತ 25 ಮಂದಿ ಸಾಧಕರ ಮುಡಿಗೆ ಬಿಜಿಎಸ್ ಕರಾವಳಿ ರತ್ನ ಪ್ರಶಸ್ತಿಯ ಗರಿ

ಹೊಸದಿಗಂತ ವರದಿ,ಮಂಗಳೂರು:

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ಕಾವೂರಿನ ಬಿಜಿಎಸ್ ಸಭಾಂಗಣದಲ್ಲಿ ಮಂಗಳವಾರ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ಬಿಜಿಎಸ್ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಡಾ.ಕೆ. ಚಿನ್ನಪ್ಪ ಗೌಡ (ಸಾಹಿತ್ಯ), ಪ್ರೊ.ಕೆ.ವಿ.ರಾವ್ (ವಿಜ್ಞಾನ), ಗುರುವಪ್ಪ ಎನ್.ಟಿ. ಬಾಳೆಪುಣಿ (ಮಾಧ್ಯಮ), ಸಹಿತ ಡಾ. ರಮೇಶ್ ಡಿ.ಪಿ., ಡಾ. ಸತೀಶ್ ಕಲ್ಲಿಮಾರ್ (ವೈದ್ಯಕೀಯ), ಪ್ರಕಾಶ್ ಅಂಚನ್ ಬಂಟ್ವಾಳ (ಶಿಕ್ಷಣ), ಮಾಧವ ಸುವರ್ಣ (ಧಾರ್ಮಿಕ), ಭಕ್ತಿ ಭೂಷಣ್‌ದಾಸ್ (ಗೋ ಸೇವೆ), ಪುಷ್ಪಾವತಿ ಬುಡ್ಲೆಗುತ್ತು (ನಾಟಿ ವೈದ್ಯೆ), ವೀಣಾ ಕುಲಾಲ್ (ಸಮಾಜಸೇವೆ), ನರಸಿಂಹ ರಾವ್ ದೇವಸ್ಯ, ಡಾ.ಕೆ.ಎಸ್. ಗೋಪಾಲಕೃಷ್ಣ ಕಾಂಚೋಡು, ಸುರೇಶ್ ಬಲ್ನಾಡು (ಕೃಷಿ), ಜಗದೀಶ್ ಆಚಾರ್ಯ (ಸಂಗೀತ), ಮಂಜುಳಾ ಸುಬ್ರಹ್ಮಣ್ಯ (ನೃತ್ಯ), ಶಿವರಾಮ ಪಣಂಬೂರು (ಯಕ್ಷಗಾನ), ಸುಜಾತ ಮಾರ್ಲ (ಯೋಗ), ಸಚಿನ್ ಸುಂದರ ಗೌಡ, ರಾಧಾಕೃಷ್ಣ, ಕೇಶವ ಅಮೈ, ಕುಸುಮಾಧರ (ಉದ್ಯಮ), ಅಭಿಷೇಕ್ ಶೆಟ್ಟಿ (ಕ್ರೀಡೆ), ಮಾಧವ ಉಳ್ಳಾಲ್ (ಪರಿಸರ), ವಿಕ್ರಂ ಬಿ. ಶೆಟ್ಟಿ (ಚಿತ್ರಕಲೆ) ಅವರಿಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ,ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ರಜತ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ, ಹೊಸದಿಗಂತ ಪತ್ರಿಕೆಯ ಸಿಇಒ ಪಿ.ಎಸ್. ಪ್ರಕಾಶ್,ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಶಾಸಕ ಡಾ.ವೈ. ಭರತ್ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಸುಮಂಗಳಾ ಮುಖ್ಯ ಅತಿಥಿಯಾಗಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!