ಮಾರ್ಚ್ ತಿಂಗಳಲ್ಲಿ ರಾಜ್ಯ ಬಿಜೆಪಿಯಿಂದ ಒಟ್ಟು ನಾಲ್ಕು ಚುನಾವಣಾ ಯಾತ್ರೆಗಳು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯು ಮಾರ್ಚ್ ತಿಂಗಳಿನಲ್ಲಿ 4 ವಿಜಯ ಸಂಕಲ್ಪ ಯಾತ್ರೆಗಳನ್ನು ಆಯೋಜಿಸಲಿರುವುದಾಗಿ ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ವಿವರ ನೀಡಿದರು.

ಮಾರ್ಚ್ 1ರಂದು ಮಲೆ ಮಹದೇಶ್ವರ ಬೆಟ್ಟ, ಹನೂರು ತಾಲ್ಲೂಕಿನಿಂದ ಮೊದಲನೇ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದ ಚಾಲನೆ ನೀಡಲಿದ್ದಾರೆ. ಮಾರ್ಚ್ 2ರಂದು ಸಂಗೊಳ್ಳಿ ರಾಯಣ್ಣ ಸ್ಮಾರಕ, ನಂದಗಢದಿಂದ ಯಾತ್ರೆಗೆ ಕೇಂದ್ರರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಚಾಲನೆ ಸಿಗಲಿದೆ. ನಂದಗಢದಿಂದ ಹೊರಡುವ ಯಾತ್ರೆಯು ಕಿತ್ತೂರು ಚೆನ್ನಮ್ಮನ ಹುಟ್ಟೂರಾದ ಕಿತ್ತೂರಿಗೂ ಹೋಗಲಿದೆ.

ಮಾರ್ಚ್ 3ರಂದು ನೂತನ ಅನುಭವ ಮಂಟಪ ನಿರ್ಮಾಣವಾಗುತ್ತಿರುವ ಸ್ಥಳ, ಬಸವಕಲ್ಯಾಣ, ಬೀದರ್ ಜಿಲ್ಲೆಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಚಾಲನೆ ಸಿಗಲಿದೆ. ಅಲ್ಲದೆ ನಾಡಪ್ರಭು ಕೆಂಪೇಗೌಡ ಪ್ರತಿಮೆ, ದೇವನಹಳ್ಳಿ ಬಳಿಯ ಯಾತ್ರೆಗೂ ಕೇಂದ್ರಗೃಹ ಸಚಿವ ಶ್ರೀ ಅಮಿತ್ ಶಾ ಅವರೇ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಹಲವು ಮುಖಂಡರುಗಳು 4 ಯಾತ್ರೆಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

50ಕ್ಕೂ ಹೆಚ್ಚು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ನಾಯಕರು ಪಾಲ್ಗೊಳ್ಳುತ್ತಾರೆ. ರಾಜ್ಯದ ಎಲ್ಲಾ 31 ಜಿಲ್ಲೆಗಳು ಮತ್ತು 224 ವಿಧಾನಸಭಾ ಕ್ಷೇತ್ರಗಳ ಸಂಪರ್ಕ ನಡೆಯಲಿದೆ. ನಾಲ್ಕು ರಥಗಳ ಮೂಲಕ ಒಟ್ಟು 8,000 ಕಿ.ಮೀ . ಯಾತ್ರೆ ಸಂಚರಿಸಲಿದೆ. ಯಾತ್ರೆಯ ಉದ್ದಕ್ಕೂ ಒಟ್ಟು 80ಕ್ಕೂ ಹೆಚ್ಚು ರ್ಯಾಲಿ ಮತ್ತು 75 ಸಾರ್ವಜನಿಕ ಸಭೆಗಳು ನಡೆಯಲಿವೆ. 150ಕ್ಕೂ ಹೆಚ್ಚು ರೋಡ್ ಶೋಗಳು ಸಹಾ ನಡೆಯಲಿವೆ. ಈ ಮೂಲಕ ನಾಡಿನ 4 ಕೋಟಿ ಜನರನ್ನು ಸಂಪರ್ಕಿಸಲಾಗುವುದು.

ಯಾತ್ರೆಯ ಅವಧಿ 20 ದಿನಗಳು ಎಂದ ಅವರು, 150 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಮತ್ತು ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ದಾಖಲೆ ಸೃಷ್ಟಿಸುವುದು ಇದರ ಗುರಿ ಎಂದು ವಿವರಿಸಿದರು.
ಮಾರ್ಚ್ 25ರಂದು ದಾವಣಗೆರೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಈ ಮೆಗಾ ರ್ಯಾಲಿ ನಡೆಯಲಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!