ಹೊಸದಿಗಂತ ವರದಿ ಆಲೂರು:
ಜಮೀನಿನಲ್ಲಿ ದನ ಕಾಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಹತ್ತಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರವ ಘಟನೆ ಚಿಕ್ಕಕಣಗಾಲು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಪಾಳ್ಯ ಹೋಬಳಿ ಚಿಕ್ಕಕಣಗಾಲು ಗ್ರಾಮದ ಕರಿಯಯ್ಯ ಎಂಬುವರು ಮಾರಸನಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯ ಪಕ್ಕದಲ್ಲಿರುವ ತಮ್ಮ ಜಮೀನಿನಲ್ಲಿ ದನ ಕರುಗಳನ್ನು ಮೇಯಿಸುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅದೇ ಗ್ರಾಮದ ನಿಂಗರಾಜು ಎಂಬುವವರು ರಸ್ತೆಯ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾರೆ. ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ರಭಸಕ್ಕೆ ಕರಿಯಯ್ಯ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ನಂತರ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕರಿಯಯ್ಯ ಮಗ ದಿನೇಶ್ ಅವರು ನೀಡಿದ ದೂರಿನ ಮೇರೆಗೆ ಆಲೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಂಗಾಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಟ್ರ್ಯಾಕ್ಟರ್ ನಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದು ಆಲೂರು ಪಟ್ಟಣ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.