ಮಂಗಳೂರು ಜಂಕ್ಷನ್ ಬಳಿ ಹಳಿತಪ್ಪಿ ಕಂಬಕ್ಕೆ ಡಿಕ್ಕಿಯಾದ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸರಕು ಹೇರಿದ್ದ ರೈಲುಗಾಡಿ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದ ಬಳಿ ಹಳಿ ತಪ್ಪಿದೆ. ರೈಲ್ವೇ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಹಳಿ ಸರಿಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಮೂಲಗಳ ಮಾಹಿತಿ ಪ್ರಕಾರ ರೈಲಿನ ಎರಡು ಸರಕು ಬೋಗಿಗಳು ಹಳಿತಪ್ಪಿವೆ. ಬಳಿಕ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲುಗಳ ಸಂಚಾರಕ್ಕೆ ಯಾವುದೇ ಅಡಚಣೆ ಆಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!