ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿಯ ಸುರಪುರದ ತಿಂಥಣಿ ಬಳಿ ಐವರು ತೆರಳುತ್ತಿದ್ದ ಬೈಕ್ ಗೆ ಬಸ್ ಹೊಡೆದಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.